
ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
------
ಆಸ್ಪತ್ರೆಯ ಮೂಲಸೌಕರ್ಯ ಬಲವರ್ಧನೆಗೆ ಸೂಕ್ತ ಕ್ರಮ-ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ
=====================
ಯಾದಗಿರಿ, ಆಗಸ್ಟ್. 23 : ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ ಅವರಿಂದು ಭೇಟಿ ನೀಡಿ ಪರಿಶೀಲಿಸಿದ ಅವರು ಸಾರ್ವಜನಿಕರಿಗೆ ಹಾಗೂ ರೋಗಿಗಳಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಯ ವಿವಿಧ ವಿಭಾಗಗಳು, ಮೂಲಸೌಕರ್ಯ ಹಾಗೂ ರೋಗಿಗಳಿಗೆ ಲಭ್ಯವಿರುವ ಸೌಲಭ್ಯಗಳನ್ನು ವೀಕ್ಷಿಸಿದರು.
ನಂತರ ಮಾತನಾಡಿದ ಜಿಲ್ಲಾದಿಕಾರಿ, ಗರ್ಭಿಣಿಯರಿಗೆ ಸುರಕ್ಷಿತ ಹಾಗೂ ಸುಸಜ್ಜಿತ ಹೆರಿಗೆ ಸೇವೆ ಒದಗಿಸಲು ಹೊಸ ಹೆರಿಗೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ನವಜಾತ ಶಿಶುಗಳಿಗೆ ವಿಶೇಷ ಆರೈಕೆ ಮತ್ತು ಚಿಕಿತ್ಸೆಯನ್ನು ಒದಗಿಸಲು ಹೊಸ Special Newborn Care Unit (SNCU) ಸ್ಥಾಪಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಮಕ್ಕಳಿಗೆ ತೀವ್ರ ನಿಗಾ ಚಿಕಿತ್ಸೆ ನೀಡಲು ಹೊಸ Paediatric Intensive Care Unit (PICU) ಸ್ಥಾಪಿಸಲಾಗಿದೆ. ಹೊರರೋಗಿಗಳ ನೋಂದಣಿ ಮತ್ತು ಸೇವೆಗಳನ್ನು ಸುಗಮಗೊಳಿಸಲು ಹೊಸ ಓಪಿಡಿ ಕೌಂಟರ್ಗಳನ್ನು ತೆರೆಯಲಾಗಿದೆ. ಆಸ್ಪತ್ರೆಯ ಆವರಣದ ಒಂದು ಭಾಗದ ಚರಂಡಿ ವ್ಯವಸ್ಥೆಯನ್ನು ನವೀಕರಿಸಿ, ಸ್ವಚ್ಛತೆ ಮತ್ತು ನೈರ್ಮಲ್ಯ ಸುಧಾರಿಸಲಾಗಿದೆ. ವಿದ್ಯುತ್ ವ್ಯತ್ಯಯದಿಂದ ತುರ್ತು ಆರೋಗ್ಯ ಸೇವೆಗಳಿಗೆ ತೊಂದರೆಯಾಗದಂತೆ ಹೊಸ ಜನರೇಟರ್ ಅಳವಡಿಸಲಾಗಿದೆ ಎಂದು ತಿಳಿಸಿದರು.
ಆಸ್ಪತ್ರೆಯ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು, ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಮುಂದಿನ ಹಂತದಲ್ಲಿ ಉಳಿದ ಭಾಗದ ಚರಂಡಿ ನವೀಕರಣ, ಆಸ್ಪತ್ರೆಯ ಕಟ್ಟಡ ಮತ್ತು ಆವರಣದ ಸಮಗ್ರ ನಿರ್ವಹಣೆ, ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ ಸುಧಾರಣೆ, ಅಗತ್ಯ ವೈದ್ಯಕೀಯ ಉಪಕರಣಗಳ ಲಭ್ಯತೆ, ತಯಿ ಮತ್ತು ಮಕ್ಕಳಿಗೆ ಅನುಕೂಲಕರವಾದ ನಿರೀಕ್ಷಣಾ ಪ್ರದೇಶಗಳ ಅಭಿವೃದ್ಧಿ, ವಿದ್ಯುತ್ ಮತ್ತು ಇತರೆ ತುತುಥ ಮೂಲಸೌಕರ್ಯಗಳ ಬಲವರ್ಧನೆ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಹಂತ ಹಜಂತವಾಗಿ ಕೈಗೊಳ್ಳಲು ಕ್ರಮವಹಿಸಲಾಗುವುದೆಂದರು.
ಆಸ್ಪತ್ರೆಯ ಮಾನವ ಸಂಪನ್ಮೂಲದ ಅಗತ್ಯತೆ, ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿ ಲಭ್ಯತೆ, ತುರ್ತು ಸೇವೆಗಳ ಸಾಮಥ್ರ್ಯ ಹಾಗೂ ರೋಗಿಗಳ ಸೇವಾ ವ್ಯವಸ್ಥೆ ಕುರಿತು ಪರಿಶೀಲಿಸಿ ಅಗತ್ಯವಿರುವಲ್ಲಿ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಆಸ್ಪತ್ರೆಯನ್ನು ಇನ್ನುಷ್ಟು ಸುಸಜ್ಜಿತಗೊಳಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯೋಚಿತ ಆರೋಗ್ಯ ಸೇವೆಗಳನ್ನು ಒದಗಿಸುವುದು ಆಡಳಿತದ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
Yadgir, Yadgir | Aug 23, 2026