BREAKING NEWS || ಅಕ್ರಮ ಅಕ್ಕಿ ಸಾಗಣೆ ಪ್ರಕರಣ: ಸಿಪಿಐ ಸೇರಿ ನಾಲ್ವರು ಅಮಾನತು
ಕಲಬುರಗಿ: ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸಲಾಗುತ್ತಿದ್ದ ಅಕ್ಕಿ ತುಂಬಿದ ವಾಹನವನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸದೇ ಬಿಟ್ಟು ಕಳುಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಳಂದ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಆಳಂದ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶರಣಬಸಪ್ಪ ಕೋಡ್ಲಾ ಹಾಗೂ ಮೂವರು ಪೊಲೀಸ್ ಕಾನ್ಸ್ಟೆಬಲ್ಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.
ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸಲಾಗುತ್ತಿದ್ದ ಅಕ್ಕಿ ತುಂಬಿದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ವಾಹನದಲ್ಲಿದ್ದವರಿಂದ ಹಣ ಪಡೆದು, ಯಾವುದೇ ಎಫ್ಐಆರ್ ದಾಖಲಿಸದೇ ವಾಹನವನ್ನು ಬಿಟ್ಟು ಕಳುಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ, ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಹಾಗೂ ಪ್ರಕರಣವನ್ನು ನಿಯಮಾನುಸಾರ ದಾಖಲಿಸದೇ ಬಿಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ಸಿಪಿಐ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಿದೆ.
ಘಟನೆಗೆ ಸಂಬಂಧಿಸಿದಂತೆ ಇಲಾಖಾ ಮಟ್ಟದಲ್ಲಿ ಮುಂದಿನ ಕ್ರಮ ಹಾಗೂ ತನಿಖೆ ನಡೆಯುವ ಸಾಧ್ಯತೆ ಇದೆ.
Yadgir, Yadgir | Oct 4, 2026