
ನ.15 ರಂದು ನಡೆಯುವ ಪರೀಕ್ಷೆಗೆ ಸಕಲ ಸಿದ್ಧತೆ: ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದ
-ಜಿಲ್ಲಾಧಿಕಾರಿ ಸ್ನೇಹಲ್. ಆರ್
ಧಾರವಾಡ : ನ.14: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ನವೆಂಬರ್ 15, 2026 ರಂದು ಗೆಜೆಟೆಡ್ ಪೆÇ್ರಬೆಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 319 ಹುದ್ದೆಗಳ ನೇರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷ್ಷೆ ನಡೆಯುವ ಹಿನ್ನೆಲೆಯಲ್ಲಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳು ಹಾಗೂ ಕೋಚಿಂಗ್ ಸೆಂಟರ್ಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಮತ್ತು ಹುಬ್ಬಳ್ಳಿ-ಧಾರವಾಡ ಪೋಲಿಸ್ ಆಯುಕ್ತರಾದ ಬೊರಸೆ ಭೂಷಣ್ ಗುಲಾಬರಾವ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಮಾತನಾಡಿ, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳ ಹತ್ತಿರ ಪರೀಕ್ಷೆಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು. ಪರೀಕ್ಷೆಗೆ ಅಗತ್ಯವಿರುವ ಎಲ್ಲ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕ, ಗೊಂದಲ ಅಥವಾ ಅಳುಕಿಗೆ ಒಳಗಾಗದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು ಎಂದು ಧೈರ್ಯ ತುಂಬಿದರು.
ಇದೇ ವೇಳೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪುಸ್ತಕ ಮಳಿಗೆಗಳು ಹಾಗೂ ಜೆರಾಕ್ಸ್ ಕೇಂದ್ರಗಳಿಗೂ ಭೇಟಿ ನೀಡಿ, ಕಾರ್ಯನಿರ್ವಹಿಸದಂತೆ ಸೂಚಿಸಿದರು. ಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಅಲ್ಲಿನ ಸಿಬ್ಬಂದಿಗೆ ಸೂಚಿಸಿದರು. ಅಲ್ಲದೆ, ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಪರೀಕ್ಷೆಯನ್ನು ಸುಗಮವಾಗಿ ಹಾಗೂ ಯಾವುದೇ ಅಡಚಣೆಗಳಿಲ್ಲದೆ ನಡೆಸುವ ಉದ್ದೇಶದಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ನೇಹಲ್. ಆರ್ ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡ ಪೋಲಿಸ್ ಆಯುಕ್ತರಾದ ಬೊರಸೆ ಭೂಷಣ್ ಗುಲಾಬರಾವ್ ಮಾತನಾಡಿ, ನಾಳೆ ನಡೆಯಲಿರುವ ಪರೀಕ್ಷೆಗಾಗಿ ಜಿಲ್ಲಾಡಳಿತದ ವತಿಯಿಂದ 600 ಸಿವಿಲ್ ಸಿಬ್ಬಂದಿ ಹಾಗೂ ಪೆÇಲೀಸ್ ಇಲಾಖೆಯ ವತಿಯಿಂದ 400 ಸಿಬ್ಬಂದಿ ಸೇರಿದಂತೆ ಒಟ್ಟು 1,000 ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಬಂದೋಬಸ್ತ್ ಹಾಗೂ ಅಗತ್ಯ ವ್ಯವಸ್ಥೆಗಳಿಗಾಗಿ ನಿಯೋಜಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ಆತಂಕವಿಲ್ಲದೆ ಶಾಂತ ಮನಸ್ಸಿನಿಂದ ಪರೀಕ್ಷೆ ಬರೆಯಬೇಕು ಎಂದು ಅವರು ಹೇಳಿದರು.
#KPSCExam #KPSC2026 #KarnatakaPSC #GazettedProbationers #KPSCRecruitment #Dharwad #HubliDharwad #SnehalR #BorseBhushanGulabrao #KarnatakaNews #ExamPreparation #CompetitiveExams #GovernmentJobs #ExamUpdates #KarnatakaGovernment #PoliceSecurity #YadgirNews #YadgirNewsKannada
---
Yadgir, Yadgir | Nov 14, 2026