BREAKING NEWS || ಮಡ್ಡಾಳ್ ಬಳಿ ಭೀಕರ ರಸ್ತೆ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ
ಶಹಾಪುರ: ತಾಲೂಕಿನ ಮಡ್ಡಾಳ್ ಗ್ರಾಮದ ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಮೂವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಶಹಾಪುರ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಅವರು ಕಲಬುರಗಿಯ ಆಸ್ಪತ್ರೆಗೆ ತಕ್ಷಣ ಭೇಟಿ ನೀಡಿದರು. ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ಪರಿಸ್ಥಿತಿಯನ್ನು ಖುದ್ದಾಗಿ ವಿಚಾರಿಸಿದ ಅವರು, ಸಂತ್ರಸ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಗಾಯಾಳುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಉತ್ತಮ ವೈದ್ಯಕೀಯ ನೆರವು ಹಾಗೂ ತುರ್ತು ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚನೆ ನೀಡಿದ ಶಾಸಕರು, ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು.
#Shahapur #AccidentNews #Yadgir #SaranabasappaGowdaDarshanapur #MLA #Kalaburagi Hospital Visit #KarnatakaNews #ShahapurNews #MaddalAccident #BreakingNewsKarnataka
Yadgir, Yadgir | Aug 23, 2026