BIG BREAKING NEWS || ಗುರುಶಿಣಗಿ ಬ್ಯಾರೇಜ್‌ನಿಂದ ನೀರಿನ ಹೊರಹರಿವು ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ
ಯಾದಗಿರಿ, ಆ.3: ಯಾದಗಿರಿ ಬ್ಯಾರೇಜ್‌ಗೆ ಒಳಹರಿವು ಗಣನೀಯವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ಯಾರೇಜ್‌ನ ಒಟ್ಟು 20 ಗೇಟ್‌ಗಳ ಮೂಲಕ ನೀರನ್ನು ಹೊರಹರಿಸಲಾಗುತ್ತಿದೆ.
ಈ ಹಿಂದೆ ಸುಮಾರು 80 ಸಾವಿರ ಕ್ಯೂಸೆಕ್ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ಇದೀಗ ಅದನ್ನು ಒಂದು ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಹೆಚ್ಚಿರುವುದರಿಂದ ರೈತರು, ಸಾರ್ವಜನಿಕರು ಹಾಗೂ ನದಿ ಪಾತ್ರದ ಗ್ರಾಮಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಸಂಬಂಧಿತ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಯಾರೂ ಸಹ ನದಿಗೆ ಇಳಿಯುವುದು, ಸೇತುವೆಗಳ ಮೇಲೆ ಅನಗತ್ಯವಾಗಿ ನಿಲ್ಲುವುದು ಅಥವಾ ನದಿ ತೀರದಲ್ಲಿ ಸಂಚರಿಸುವುದನ್ನು ತಪ್ಪಿಸಿ, ಮಕ್ಕಳನ್ನು ನದಿ ಸಮೀಪಕ್ಕೆ ಬಿಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನದಿ ಪಾತ್ರದ ಜನರು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ ಸುರಕ್ಷಿತವಾಗಿರಬೇಕು ಎಂದು ಮನವಿ ಮಾಡಲಾಗಿದೆ.
Yadgir, Yadgir | Aug 4, 2026