BIG BREAKING NEWS || ಅಪರಿಚಿತ ವ್ಯಕ್ತಿ ಸಾವು-ವಾರಸುದಾರರ ಪತ್ತೆಗೆ ಪೊಲೀಸರ ಮನವಿ
ಬಳ್ಳಾರಿ,ಅ.23 :
ನಗರದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅನಂತಪುರ ರಸ್ತೆಯಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ಹತ್ತಿರ ಅ.18ರಂದು ಸುಮಾರು 50 ವರ್ಷ ಮೇಲ್ಪಟ್ಟ ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಸಾರ್ವಜನಿಕರು ನೀಡಿದ ಮಾಹಿತಿಯ ಮೇರೆಗೆ, 108 ಆಂಬುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅವರನ್ನು ಚಿಕಿತ್ಸೆಗಾಗಿ ಬಳ್ಳಾರಿಯ ಬಿಎಂಸಿಆರ್.ಸಿ. ಆಸ್ಪತ್ರೆಗೆ ದಾಖಲಿಸಿದ್ದರು.
ಮೃತನ ಚಹರೆ ಗುರುತು:
ಎತ್ತರ 5.6 ಅಡಿ, ಗೋಧಿ ಮೈಬಣ್ಣ, ಕೋಲು ಮುಖ, ಬೋಳು ತಲೆ (ಕೂದಲು ಇರುವುದಿಲ್ಲ), ಸಣ್ಣದಾಗಿರುವ ಬಿಳಿ ಮಿಶ್ರಿತ ಕಪ್ಪು ಮೀಸೆ ಹಾಗೂ ಗಡ್ಡ ಬಿಟ್ಟಿರುತ್ತಾನೆ. ಬೂದು ಬಣ್ಣದ ಹಾಫ್ ತೋಳಿನ ಟೀ-ಶರ್ಟ್ ಹಾಗೂ ತಿಳಿ ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ.
ಮೃತನ ವಾರಸುದಾರರು ಅಥವಾ ಸಂಬAಧಿಕರ ಬಗ್ಗೆ ಮಾಹಿತಿ ಇರುವವರು ಕೂಡಲೇ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವAತೆ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.
Yadgir, Yadgir | Oct 23, 2026