ನಗರದ ಸ್ವಚ್ಛತೆ ಮತ್ತು ಸೌಂದರ್ಯವನ್ನು ಹೆಚ್ಚಿಸುವ ಉದ್ದೇಶದಿಂದ, ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರು ಸರ್ವಜ್ಞನಗರ ವಿಭಾಗ ವ್ಯಾಪ್ತಿಯ ಮಾರುತಿ ಸೇವಾ ನಗರದ ಮಸ್ಟರಿಂಗ್ ಪಾಯಿಂಟ್ ಗೆ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಭೇಟಿ ನೀಡಿ ಆಟೋ ಟಿಪ್ಪರ್ ಹಾಜರಾತಿ ಹಾಗೂ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು. ಪರಿಶೀಲನೆ ಸಮಯದಲ್ಲಿ ಡ್ರೈವರ್ ಮತ್ತು ಲೋಡರ್ ಕೈಗವಸವನ್ನು ಕಡ್ಡಾಯವಾಗಿ ಧರಿಸಲು ಹಾಗೂ ಪರಿಶೀಲನೆ ವೇಳೆ ಕಂಡುಬಂದ ಎಲ್ಲಾ ಬ್ಲಾಕ್ ಸ್ಪಾಟ್ ಗಳನ್ನು ತಕ್ಷಣ ತೆರವುಗೊಳಿಸಿ, ರಸ್ತೆ ಸ್ವಚ್ಛಗೊಳಿಸಲು ಸೂಚನೆ ನೀಡಿದರು.