ಬೆಂಗಳೂರು ಉತ್ತರ: ಕೃಷ್ಣ ಮೇಲ್ದಂಡೆ ಹಿನ್ನೆಲೆ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ: ನಗರದಲ್ಲಿ ಹೆಚ್.ಕೆ ಪಾಟೀಲ್
ವಿಧಾನಸೌಧದಲ್ಲಿ ಸಚಿವ ಎಚ್ ಕೆ ಪಾಟೀಲ್ ಅವರು, ಮಂಗಳವಾರ ಮಧ್ಯಹ್ನ 1 ಗಂಟೆ ಸುಮಾರಿಗೆ ಮಾಧ್ಯಮಗಳ ಜಿತೆ ಮಾತನಾಡಿ, ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ಸಲುವಾಗಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ, ಈ ಸಭೆಯಲ್ಲಿ ಯೋಜನೆಗೆ ಅಗತ್ಯ ಭೂಮಿ ಹಾಗೂ ಪರಿಹಾರದ ಬಗ್ಗೆ ಚರ್ಚೆ ಆಗಲಿದೆ. ಈ ಸಂಬಂಧಿಸಿದಂತೆ ಅಂತಿಮ ತೀರ್ಮಾನ ಆಗಲಿದೆ ಎಂಬ ಆಶಾ ಭಾವನೆ ಇದೆ. 75,000 ಎಕರೆ ಭೂಮಿ ಮುಳುಗಡೆ ಆಗಲಿದೆ, ಅವರಿಗೆ ಪರಿಹಾರ ಕೊಡುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ಮಾಡಲಿದೆ ಎಂದರು.