ಕೋಗಿಲು ಬಡಾವಣೆ ಅಕ್ರಮವಾಸಿಗಳ ತೆರವು ಸಂಬಂಧ ಘಟನಾವಳಿಯ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ. ಯಲಹಂಕದ ಕೋಗಿಲು ಬಡಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಅವರ ನೇತೃತ್ವದ ಸತ್ಯಶೋಧನ ತಂಡವು ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಲೋಒಭವನದ ಬಳಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರಿಗೆ ವರದಿಯನ್ನು ಸಲ್ಲಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇರಳದ ಸಿಎಂ, ಕೆ.ಸಿ.ವೇಣುಗೋಪಾಲ್ ಸಾಕಷ್ಟು ಕೂಗಾಡಿದರಲ್ಲವೇ? ತೆರವಾದವರ ಈ ಪಟ್ಟಿಯಲ್ಲಿ ಒಬ್ಬರೇ ಒಬ್ಬರು ಕೇರಳದವರಿಲ್ಲ. ಕೇರಳದ ಮತಕ್ಕಾಗಿ ಇಷ್ಟೆಲ್ಲ ರಾದ್ಧಾಂತ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.