ಸಚಿವ ಈಶ್ವರ್ ಖಂಡ್ರೆ ಅವರು ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ ವಿಚಾರಕ್ಕೆ ಸಂಬಂಧಿಸಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಆರ್.ಟಿ ನಗರದ ಬಳಿ ಮಾಧ್ಯಮಗಳ ಜೊತೆ ಮಾತನಾಡಿ, ಇಂದು ಶತಾಯುಷಿಗಳ ಏಳನೇ ಪುಣ್ಯಸ್ಮರಣೆ. ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ. ಅವರು ತೋರಿದ ದಾರಿಯಲ್ಲಿ ನಡೆಯುತ್ತೇವೆ. ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡ್ತೇವೆ. ಮಹಾಸಭಾದ ಅಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ನನ್ನ ಮೇಲೆ ನಂಬಿಕೆ ಇಟ್ಟು ಕೊಟ್ಟಿದ್ದಾರೆ. ನಮ್ಮತಂದೆ ಹಾಗು ಶಾಮನೂರು ಅವರು ಸೇವೆ ಮಾಡಿದ್ದರು. ಈಗ ನನಗೂ ಸೇವೆಗೆ ಅವಕಾಶ ಕೊಟ್ಟಿದ್ದಾರೆ. ಈ ಸ್ಥಾನದ ಹಿರಿಮೆ ಗರಿಮೆ ಮಾಡಬೇಕು. ಎಲ್ಲಾ ಸಮುದಾಯ ಜೊತೆಯಲ್ಲೇ ಕೊಂಡೊಯ್ಯಬೇಕು. ಎಲ್ಲರ ಜೊತೆಯೇ ರಾಷ್ಟ್ರ ನಿರ್ಮಾಣ ಮಾಡಬೇಕು ಎಂದರು.