ಶಿವಮೊಗ್ಗ: ಶಿವಮೊಗ್ಗದಲ್ಲಿ ಪೊಲೀಸ್ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿದ ಎಸ್ಪಿ ಮಿಥುನ್ ಕುಮಾರ್
ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಮಕ್ಕಳ ಕ್ರೀಡಾಕೂಟವನ್ನು ಎಸ್ಪಿ ಮಿಥುನ್ ಕುಮಾರ್ ಭಾನುವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಿದರು. ಪೊಲೀಸ್ ಮಕ್ಕಳ ಕ್ರೀಡಾಕೂಟದಲ್ಲಿ ಕಪ್ಪೆ ಜಿಗಿತಸ್ಪರ್ಧೆ, ಓಟದ ಸ್ಪರ್ಧೆ, ಬಕೆಟ್ ಗೆ ಬಾಲ್ ಎಸೆಯುವ ಸ್ಪರ್ಧೆ, ಹಿಟ್ ದಿ ವಿಕೆಟ್ ಸ್ಪರ್ಧೆ, ಗುಂಡು ಎಸೆತ ಸ್ಪರ್ಧೆ ಹಾಗೂ ಸ್ಲೋ ಸೈಕಲ್ ರೇಸ್ ಸ್ಪರ್ಧೆಗಳನ್ನೂ ಮಕ್ಕಳ ವಯೋಮಿತಿಯಂತೆ ನಡೆಸಲಾಯಿತು. ಪ್ರತಿಯೊಂದು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆಲ್ಲಾ ವಿಶೇಷ ಬಹುಮಾನಗಳ ನೀಡಿ ಪ್ರೋತ್ಸಾಹಿಸಲಾಯಿತು.