ಬೆಂಗಳೂರು ಉತ್ತರ: ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಂದ ಎರ್ನಾಕುಲಂ–ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ
ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ ನಾಲ್ಕು ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಪೈಕಿ ಎರ್ನಾಕುಲಂ–ಕೆಎಸ್ಆರ್ ಬೆಂಗಳೂರು ನಡುವಿನ ವಂದೇ ಭಾರತ್ ರೈಲಿಗೆ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀ ಪಿ ಸಿ ಮೋಹನ್,ರಾಜ್ಯಸಭಾ ಸದಸ್ಯರಾದ ಶ್ರೀ ಲಹರ ಸಿಂಗ್ ಹಾಗೂ ನೈಋತ್ಯ ರೈಲ್ವೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.