ಮುಧೋಳ: ನಗರದಲ್ಲಿ ವಿಕಲಚೇತನರಿಗೆ ವಾಹನಗಳನ್ನ ವಿತರಿಸಿದ ಸಚಿವ ಆರ್.ಬಿ.ತಿಮ್ಮಾಪೂರ್
ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವಲ ಆರ್.ಬಿ. ತಿಮ್ಮಾಪೂರ ಅವರ ನೇತೃತ್ವದಲ್ಲಿ ಮುಧೋಳ ನಗರದ ತಾಲೂಕಾ ಪಂಚಾಯತ ಆವರಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ವಾಹನಗಳ ವಿತರಣೆಯನ್ನು ಮಾಡಿದರು. ಈ ವೇಳೆ ಮಾತನಾಡಿದ ಸಚಿವರು ಕಾರ್ಯಕ್ರಮದಲ್ಲಿ ಮಾತನಾಡಿ, "ರಾಜ್ಯ ಸರ್ಕಾರದ ನೀತಿಯಂತೆ ವಿಕಲಚೇತನರಿಗೆ ಉದ್ಯೋಗಾವಕಾಶಗಳು ಹಾಗೂ ಸಹಾಯಕ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಪ್ರಮುಖ ಗುರಿ. ಈ ವಾಹನ ವಿತರಣೆಯು ಅವರ ಜೀವನದಲ್ಲಿ ಸ್ವಾವಲಂಬನೆಯನ್ನು ತರುವಂತಹದ್ದು" ಎಂದು ಹೇಳಿದರು. ಅವರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ, ತಾಲೂಕಿನ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದರು.