ಶಿವಮೊಗ್ಗ: ಗಾಜನೂರಿನ ತುಂಗಾ ಡ್ಯಾಮ್‌ಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ, ಪರಿಶೀಲನೆ
ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗದ ಗಾಜನೂರು ಜಲಾಶಯ ಭರ್ತಿಯಾಗಿದೆ. ಮಂಗಳವಾರ ಗಾಜನೂರು ಜಲಾಶಯಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗ್ಡೆಯವರು ಭೇಟಿ ನೀಡಿದ್ದಾರೆ ಡ್ಯಾಮ್ ನ ಪ್ರಸ್ತುತ ಒಳಹರಿವು ಹಾಗೂ ಹೊರಹರಿವಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪಡೆದುಕೊಂಡು ಪ್ರಸ್ತುತ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಕೈಗೊಳ್ಳಬೇಕಾದ ಎಚ್ಚರಿಕೆಯ ಕುರಿತು ಮಾರ್ಗದರ್ಶನ ನೀಡಿದರು. ಅಲ್ಲದೇ ಮಳೆಯ ಪ್ರಮಾಣ ಅಧಿಕವಾಗುತ್ತಿರುವ ಕಾರಣ ನದಿ ಪಾತ್ರದ ಜನತೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.