ಬೆಂಗಳೂರು ಉತ್ತರ: ಮುಖ್ಯ ಆಯುಕ್ತ ಮಹೇಶ್ವರ್ ರಾವ್ ರವರ ನೇತೃತ್ವದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯಾಚರಣೆ ಕುರಿತ ಸಭೆ
ನಗರದ ರಸ್ತೆ ಗುಂಡಿಗಳನ್ನು ಮುಚ್ಚುವ ಮತ್ತು ಇನ್ನಿತರೆ ಮೂಲಸೌಕರ್ಯ ಸಂಬಂಧಿತ ವಿಚಾರಗಳ ಕುರಿತು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಸೋಮವಾರ ಮಧ್ಯಾಹ್ನ ೧ ಗಂಟೆ ಸುಮಾರಿಗೆ ವರ್ಚುವಲ್ ಸಭೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಸಭೆಯಲ್ಲಿ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಬೆಂ.ಘ.ತ್ಯಾ.ನಿ ನಿಯಮಿತದ ಸಿಇಒ ಕರೀಗೌಡ, ಪಾಲಿಕೆ ಆಯುಕ್ತರು ರಾಜೇಂದ್ರ ಚೋಳನ್, ರಮೇಶ್ ಡಿ.ಎಸ್, ಪೊಮ್ಮಲ ಸುನೀಲ್ ಕುಮಾರ್, ಡಾ. ರಾಜೇಂದ್ರ ಕೆ.ವಿ, ರಮೇಶ್ ಕೆ.ಎನ್, ಅಪರ ಆಯುಕ್ತರು, ಬಿಸ್ಮೈಲ್ ತಾಂತ್ರಿಕ ನಿರ್ದೇಶಕರು, ಮುಖ್ಯ ಅಭಿಯಂತರರು ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.