ದಾವಣಗೆರೆ: ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಮನೆಗೆ ಹಾನಿ; ಸ್ಥಳಕ್ಕೆ ಶಾಸಕ ಬಸವಂತಪ್ಪ ಭೇಟಿ, ಪರಿಶೀಲನೆ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಮನೆ ಹಾನಿಗೊಳಗಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯೆ ಲಲಿತಮ್ಮ ಅವರ ನಿವಾಸಕ್ಕೆ ಸೋಮವಾರ ಸಂಜೆ 4 ಗಂಟೆಗೆಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾವಣಗೆರೆ ತಾಲ್ಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತಾಲೂಕಿನ ನರಗನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಲಲಿತಮ್ಮ ರೇಣುಕಪ್ಪ ಎಂಬುವರ ಮನೆಯಲ್ಲಿ ಭಾನುವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡು ಮನೆಯ ಸಾಮಗ್ರಿಗಳು, ಬಟ್ಟೆ, ದವಸ, ಧಾನ್ಯಗಳು ಸುಟ್ಟಿದ್ದವು. ಸುದ್ದಿ ತಿಳಿದ ಶಾಸಕ ಕೆ.ಎಸ್.ಬಸವಂತಪ್ಪ ಗ್ರಾಮಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದರು.