ಹಿರಿಯೂರು: ಉತ್ತರೆ ಬೆಟ್ಟದಲ್ಲಿ ಪೊಲೀಸರ ಜೊತೆ ಕಿರಿಕ್ ಮಾಡಿದ್ದ ಆರೋಪಿ ನೀಲಕಂಠ ವಿರುದ್ದ ಕೇಸ್ ದಾಖಲು
ಹಿರಿಯೂರು ತಾಲ್ಲೂಕಿನ ಉತ್ತರೆ ಸಿದ್ದವ್ವನ ಬೆಟ್ಟದಲ್ಲಿ ಪೊಲೀಸರು ಮದ್ಯಪಾನ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ವೈರಲ್ ಮಾಡಿದ್ದ ವ್ಯಕ್ತಿಯ ವಿರುದ್ದ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಈ ಕುರಿತು ಭಾನುವಾರ ಬೆಳಿಗ್ಗೆ 8 ಗಂಟೆಗೆ ಪ್ರಕಟಣೆ ಮೂಲಕ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರೂ ಮಾಹಿತಿ ನೀಡಿದ್ದಾರೆ. ಕೆ.ಆರ್.ಎಸ್. ಪಕ್ಷ ಚಿತ್ರದುರ್ಗ ಪೇಸ್ ಬುಕ್ ಪೇಜ್ ನಲ್ಲಿ ವಿಡಿಯೋ ಹಾಕಿ, ಪೊಲೀಸರು ಮದ್ಯಪಾನ ಮಾಡಿದ್ದಾರೆಂದು ಆರೋಪಿಸಿ, ಪೊಲೀಸರ ಮೇಲೆ ಅವಾಚ್ಯ ಶಬ್ದಗಳಿಂದ ನಿಂಧಿಸಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪಿ ನೀಲಕಂಠ ಎಂಬಾತನ ವಿರುದ್ದ ಕೇಸ್ ದಾಖಲು ಮಾಡಲಾಗಿದೆ. ಹಿರಿಯೂರು ತಾಲ್ಲೂಕಿನ ಗೋಕುಲ ನಗರ ನಿವಾಸಿ ನೀಲಕಂಠ ಎನ್ನಲಾಗಿದೆ.