ದೇಶದ ಕಲ್ಯಾಣದ ಕಾರ್ಯದಲ್ಲಿ ತೊಡಗಿರುವ ಕನ್ನೇರಿ ಮಠದ ಸಿದ್ದೇಶ್ವರ ಶ್ರೀಗಳನ್ನು ಅಪಮಾನ ಮಾಡುವುದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಬಾಳಿಕಾಯಿ ತಿಳಿಸಿದರು. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಕುಂದಗೋಳ ಪಟ್ಟಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರ ಕನ್ನೇರಿ ಮಠದ ಸಿದ್ದೇಶ್ವರ ಶ್ರೀಗಳನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.