ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಯಾವುದೇ ಇರಾದೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.