ಸೇಡಂ: ಮಳಖೇಡ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯಲ್ಲಿ ಯುವತಿ ಹತ್ಯೆ ಪ್ರಕರಣ: ಆರೋಪಿ ಮಂಜುನಾಥ ಬಂಧನ
ಕಲಬುರಗಿ : ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಲ್ಲಿ ಯುವತಿ ಭಾಗ್ಯಶ್ರೀ ಸುಲಹಳ್ಳಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಭಾಗ್ಯಶ್ರೀಯನ್ನ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜುನಾಥ್‌ನನ್ನ ಮಳಖೇಡ ಠಾಣೆ ಪೊಲೀಸರು ಬಂಧಿಸಿದ್ದಾರೆ.. ಸೆ18 ರಂದು ಬೆಳಗ್ಗೆ 11 ಗಂಟೆಗೆ ಮಾಹಿತಿ ಲಭ್ಯವಾಗಿದೆ. ಸೆ11 ರಂದೇ ಭಾಗ್ಯಶ್ರೀ ನಾಪತ್ತೆಯಾಗಿದ್ದಳು. ಬಳಿಕ ಆಕೆಯ ಕಾಲ್ ರೆಕಾರ್ಡ್ ಪರಿಶೀಲನೆ ಮಾಡಿದಾಗ ಕೊನೆ ಕಾಲ್ ಮಂಜುನಾಥನದ್ದು ಆಗಿತ್ತು. ಅದೇ ಕಾಲ್ ಆಧಾರಾದ ಮೇಲೆ ಮಳಖೇಡನವನದಾದ ಮಂಜುನಾಥನನ್ನ ಬಂಧಿಸಿದ್ದಾರೆ.