ಬೆಂಗಳೂರು ಉತ್ತರ: ಬಸ್ ಹರಿದು ಸ್ಕೂಟರ್ ಸವಾರ ಸಾವು, ಕಂಠೀರವ ಸ್ಟೇಡಿಯಂ ಬಳಿ ಘಟನೆ
ಬೆಳ್ಳಂಬೆಳಿಗ್ಗೆ ಖಾಸಗಿ ಬಸ್ ಹರಿದು ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೆಪ್ಟೆಂಬರ್ 19ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಕಂಠೀರವ ಸ್ಟೇಡಿಯಂ ಬಳಿ ಅಪಘಾತ ಸಂಭವಿಸಿದ್ದು ಸ್ಕೂಟರ್ ಸವಾರ ರಫೀಕ್ ಉಲ್ಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್ನ ಪಕ್ಕದಲ್ಲೇ ಸಂಚರಿಸುತ್ತಿದ್ದ ರಫೀಕ್ ಉಲ್ಲಾ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದಿದ್ದಾನೆ. ಈ ವೇಳೆ ಆತನ ದೇಹದ ಮೇಲೆ ಬಸ್ನ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದು, ತಪಾಸಣೆ ನಡೆಸಿದ್ದಾರೆ.