ಚಾಮರಾಜನಗರ: ವಾಟರ್ ಮನ್ ಆತ್ಮಹತ್ಯೆ : ಸಿಮ್ಸ್ ಆಸ್ಪತ್ರೆಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ, ಸಾಂತ್ವನ
ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದ ವಾಟರ್ ಮನ್ ಚಿಕ್ಕೂಸನಾಯಕ ಆತ್ಮಹತ್ಯೆ ಹಿನ್ನೆಲೆ ವಿಷಯ ತಿಳಿದ ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಕಳೆದ 27 ತಿಂಗಳಿಂದ ಸಂಬಳ ನೀಡಿಲ್ಲ ಎಂದು ವಾಟರ್ ಮನ್ ಚಿಕ್ಕೂಸನಾಯಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನೂ ಮರಣೋತ್ತರ ಪರೀಕ್ಷೆಗಾಗಿ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿತ್ತು. ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.