ಗುಂಡ್ಲುಪೇಟೆ: ಆರ್ ಎಸ್ಎಸ್ ಬ್ಯಾನ್ ಭೀತಿ ನಡುವೆಯೂ ಪಟ್ಟಣದಲ್ಲಿ ಪಥ ಸಂಚಲನ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ ಪಥಸಂಚಲನ ನಡೆಯಿತು. RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದಕ್ಕೂ ಬ್ರೇಕ್ ಹಾಕಬೇಕೆಂದು ಸರ್ಕಾರ ಮನವಿ ಮಾಡಿದೆ. ಆರ್.ಎಸ್.ಎಸ್. ಬ್ಯಾನ್ ಭೀತಿ ನಡುವೆಯೂ ಪಟ್ಟಣದಲ್ಲಿ ಪಥಸಂಚಲನ ಯಶಸ್ವಿಯಾಗಿ ನಡೆಯಿತು. ಪಟ್ಟಣದ ಮಡಹಳ್ಳಿ ರಸ್ತೆಯಲ್ಲಿರುವ ಸ್ಮಾರ್ಟ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಜಮಾಯಿಸಿದ ಆರ್ಎಸ್ಎಸ್ ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆ ಬೀದಿಗಳಲ್ಲಿ ಪಥಸಂಚಲನ ನಡೆಯಿತು