ಸಿದ್ದಾಪುರ ತಾಲ್ಲೂಕಿನ ದೊಡ್ಮನೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನ ಆರೋಗ್ಯ ಸಮಿತಿಯ ಸಭೆ ಬುಧವಾರ ಮಧ್ಯಾಹ್ನ 3.30ರ ವೇಳೆ ಸಭೆ ನಡೆಯಿತು. ಆರೋಗ್ಯ ಕೇಂದ್ರದ ಅಭಿವೃದ್ಧಿ, ಸಾರ್ವಜನಿಕರಿಗೆ ಸಿಗಬೇಕಾದ ಸೌಲಭ್ಯಗಳು ಹಾಗೂ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಆರೋಗ್ಯ ಮುನ್ನೆಚ್ಚರಿಕೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದ ಹೆಗಡೆ ಅಧ್ಯಕ್ಷತೆಯಲ್ಲಿ ಹಮ್ಮಿಕ್ಕೊಂಡಿದ್ದ ಸಭೆಯಲ್ಲಿ ಈ ಭಾಗದಲ್ಲಿ ಕೆ.ಎಫ್.ಡಿ ಹರಡದಂತೆ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.