ಶ್ರೀರಂಗಪಟ್ಟಣ: ಪಟ್ಟಣದ ಗುಂಬಸ್ ನಲ್ಲಿ ಟಿಪ್ಪು ಜಯಂತಿ ಆಚರಣೆ, ಶಾಸಕ ತನ್ವೀರ್ ಸೇಠ್ ಭಾಗಿ
ಶ್ರೀರಂಗಪಟ್ಟಣದ ಗುಂಬಸ್ ನಲ್ಲಿ ಟಿಪ್ಪು ಜಯಂತಿ ಆಚರಣೆ ಜರುಗಿತು. ಪಟ್ಟಣದಲ್ಲಿ ನಡೆದ ಟಿಪ್ಪು ಜಯಂತಿಯ ಅಂಗವಾಗಿ ಶಾಸಕ ತನ್ವೀರ್ ಸೇಠ್ ಅವರ ನೇತೃತ್ವದಲ್ಲಿ ಟಿಪ್ಪು ಸುಲ್ತಾನ್ ಅವರ ಸಮಾಧಿ ಸ್ಥಳವಾದ ಗುಂಬಸ್ ನಲ್ಲಿ ಸರಳವಾಗಿ ಜಯಂತಿಯನ್ನು ಆಚರಿಸಲಾಯಿತು. ಟಿಪ್ಪು ವಕ್ಸ್ ಕಮಿಟಿ ಅಧ್ಯಕ್ಷರೂ ಆದ ಶಾಸಕ ತನ್ವೀರ್ ಸೇಠ್ ಅವರು ಟಿಪ್ಪು ಸಮಾಧಿಗೆ ಹೂವಿನ ಚಾದರ ಹೊದಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತನ್ವೀರ್ ಅವರು, ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ಅವರನ್ನು ವಿವಾದಾತ್ಮಕ ವ್ಯಕ್ತಿಯನ್ನಾಗಿ ಮಾಡಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದರು. ಅಲ್ಲದೆ, ಸಕರ್ಾರದಿಂದ ಟಿಪ್ಪು ಜಯಂತಿಯನ್ನು ಆಚರಿಸುವಂತೆ ತಾವು ಕೇಳಿರಲಿಲ್ಲ ಎಂದು ಅವರು