ಶೀತಗಾಳಿಯಿಂದಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕರು ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಸೂಚಿಸಿದ್ದಾರೆ. ಈ ಕುರಿತು ಶುಕ್ರವಾರ ಸಂಜೆ 5 ಪ್ರಕಟಣೆ ನೀಡಿರುವ ಅವರು, ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ತಿಳಿಸಿರುವಂತೆ, ಅನಗತ್ಯವಾಗಿ ಹೊರ ಹೋಗದೆ ಸಾಧ್ಯವಾದಷ್ಟು ಮನೆಯೊಳಗೇ ಇರುವಂತೆ ಸಲಹೆ ನೀಡಲಾಗಿದೆ. ದೇಹಕ್ಕೆ ಅಗತ್ಯ ಶಾಖ ಪೂರೈಸಲು ಆರೋಗ್ಯಕರ