ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ತನ್ನ ಪ್ರೇಯಸಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ. ಬಲವಂತದ ಪ್ರೀತಿ ಹಾಗೂ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿದ್ದು, ಕಾರಿನಲ್ಲಿ ಬಂದ ಆರೋಪಿ ನವೀನ್ ಎಂಬಾತ ಯುವತಿಯನ್ನು ಥಳಿಸಿದ್ದಾನೆ. 2024ರಲ್ಲಿ ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ನವೀನ್, ಯುವತಿಗೆ ಪ್ರೀತಿಸುವಂತೆ ಬಲವಂತ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿ ಯುವತಿಯ ವ್ಯಾನಿಟಿ ಬ್ಯಾಗ್ ಕಸಿದು, ಆಕೆಯ ಹಿಂದೆ ಓಡಿ ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಾನೆ. ಈ ಘಟನೆಯ ದೃಶ್ಯಗಳು ಸೆರೆಯಾಗಿವೆ.