ನಾಗಮಂಗಲ: ತಿರುಮಲ ಗ್ರಾಮದ ಗೇಟ್ ಬಳಿ ಹೆದ್ದಾರಿ ರಸ್ತೆ ಬದಿ ಹೊತ್ತಿ ಉರಿದ ಕಾರು: ಪ್ರಕರಣ ದಾಖಲು
ನಾಗಮಂಗಲ ತಾಲೂಕಿನ ತಿರುಮಲ ಗ್ರಾಮದ ಗೇಟ್ ಬಳಿ ಹೆದ್ದಾರಿ ರಸ್ತೆ ಬದಿ ಹೊತ್ತಿ ಉರಿದ ಕಾರು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಾಗಮಂಗಲದ ತಿರುಮಲ ಗ್ರಾಮದ ಗೇಟ್ ಬಳಿ ಚಲಿಸುತ್ತಿದ್ದ ಕಾರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿ ಕೆಳಗಿಳಿಯುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಕೂದಲೆಳೆಯ ಅಂತರದಲ್ಲಿ ಚಾಲಕ ಪಾರಾಗಿದ್ದು, ನೋಡನೋಡುತ್ತಿದ್ದಂತೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಳ್ಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.