ಬೈಕ್ ಸವಾರನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿರುವ ಪರಿಣಾಮ ಓರ್ವ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ. ಬಸವನಬಾಗೇವಾಡಿ ಪಟ್ಟಣದ ವೀರೇಶ್ ಹಿರೇಮಠ್ (19) ಮೃತ ಯುವಕ. ಅಲ್ಲದೇ, ಮತ್ತೋರ್ವ ಸವಾರನಿಗೆ ಸಣ್ಣಪುಟ್ಟ ಗಾಯಗಳು ಆಗಿದ್ದು, ಗಾಯಾಳು ಸವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬಸವನ ಬಾಗೇವಾಡಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು