ಶಾಸಕ ಶರತ್ ಬಚ್ಚೇಗೌಡ ಅವರು, ಶಯಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲಿಸಬೇಕಾದ ಭಾಷಣದ ಸಂಪ್ರದಾಯವನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿದೆ. ರಾಜ್ಯಪಾಲರು ಆಗಮಿಸುವ ಸಂದರ್ಭದಲ್ಲಿ ರಾಷ್ಟ್ರಗೀತೆಗೆ ಗೌರವ ನೀಡಬೇಕು ಎಂದು ನಾವು ಕೇಳಿಕೊಂಡಿದ್ದೇವೆ, ಅದರಲ್ಲಿ ಯಾವುದೇ ತಪ್ಪಿಲ್ಲ. ಕೇಂದ್ರ ಸರ್ಕಾರದಿಂದ ನಮಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ತಮಿಳುನಾಡು, ಕೇರಳ ಸೇರಿದಂತೆ ಬಿಜೆಪಿಯೇತರ ರಾಜ್ಯಗಳಲ್ಲಿ ನಿಯೋಜಿತ ರಾಜ್ಯಪಾಲರನ್ನು ಹತೋಟಿಗೆ ತೆಗೆದುಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ. ಇದು ಒಕ್ಕೂಟ ವ್ಯವಸ್ಥೆಗೆ ಸಂಪೂರ್ಣ ವಿರುದ್ಧ. ಈ ರೀತಿಯ ಧೋರಣೆಗೆ ನಮ್ಮ ಸಂಪೂರ್ಣ ವಿರೋಧವಿದೆ ಎಂದು ಕಿಡಿಕಾರಿದರು.