ಚಿಕ್ಕಬಳ್ಳಾಪುರ: ನಗರದಲ್ಲಿ ಬಜಾರ್ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗೆ ಕನ್ನಡಸೇನೆ ಜಿಲ್ಲಾಧ್ಯಕ್ಷರಿಂದ ಮನವಿ
ಚಿಕ್ಕಬಳ್ಳಾಪುರ ನಗರದಲ್ಲಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಕನ್ನಡಭವನ ನೂತನ ಕಟ್ಟಡ ಲೋಕಾರ್ಪಣೆ ಸೇರಿದಂತೆ ನಗರದಲ್ಲಿ ಕಿರಿದಾಗಿರುವ ಹಾಗೂ ಸಾರ್ವಜನಿಕರ ಓಡಾಟಕ್ಕೆ ಅನಾನುಕೂಲವಾಗುತ್ತಿರುವ ಬಜಾರ್ ರಸ್ತೆ ಮತ್ತು ಗಂಗಮ್ಮನ ಗುಡಿ ರಸ್ತೆಯನ್ನು ತುರ್ತು ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ಇಂದು ಜಿಲ್ಲಾಡಳಿತ ಭವನದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಕನ್ನಡಸೇನೆ ಜಿಲ್ಲಾಧ್ಯಕ್ಷ ವಿ.ರವಿಕುಮಾರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕೇಂದ್ರವಾಗಿರುವ ಇಲ್ಲಿ ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕನ್ನಡ ಭವನ ಕಟ್ಟಡವು ಇನ್ನೂ ಉದ್ಘಾಟನೆಯಾಗದೇ ಇರುವುದರಿಂದ ಕನ್ನಡದ ಕಾರ್ಯಕ್ರಮಗಳು ನಡೆಸಲು ಸ್ಥಳ ಇಲ್ಲವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.