ಯಲ್ಲಾಪುರ: ಬಳಗಾರ್ ಕ್ರಾಸ್ ಬಳಿ ರಸ್ತೆ ಮಧ್ಯೆ ಲಾರಿ ಪಲ್ಟಿ,ಸಂಚಾರ ಅಸ್ತವ್ಯಸ್ತ
ಯಲ್ಲಾಪುರ : ತಾಲೂಕಿನ ಬಳಗಾರ ಕ್ರಾಸ್ ಬಳಿ ಲಾರಿ ಪಲ್ಟಿಯಾಗಿದೆ. ಮಂಗಳೂರಿನಿಂದ ಕೊಪ್ಪಳಕ್ಕೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಲಾರಿಯಲ್ಲಿದ್ದ ಕಲ್ಲಿದ್ದಲು ಹೆದ್ದಾರಿಯಲ್ಲಿ ರಾಶಿಯಾಗಿ ಬಿದ್ದಿದ್ದು, ಜೋರಾದ ಮಳೆ ಇರುವುದರಿಂದ ತೆರವುಗೊಳಿಸುವುದಕ್ಕೆ ತೊಂದರೆಯಾಯಿತು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತೆರವಿಗೆ ಕ್ರಮ ಕೈಗೊಂಡಿದ್ದಾರೆ. ಹೆದ್ದಾರಿ ಮಧ್ಯದಲ್ಲಿಯೇ ಲಾರಿ ಪಲ್ಟಿಯಾದ ಕಾರಣ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತ್ತು.