ಹಳಿಯಾಳ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಅಂತರ್ ಮಹಾವಿದ್ಯಾಲಯ ಪುರುಷ ಹಾಗೂ ಮಹಿಳಾ ಕುಸ್ತಿ ಪಂದ್ಯಾವಳಿಯನ್ನು ಸೋಮವಾರ ಬೆಳಿಗ್ಗೆ 10:30 ಗಂಟೆ ಸುಮಾರಿಗೆ ಹಮ್ಮಿಕೊಳ್ಳಲಾಗಿತ್ತು. ಕುಸ್ತಿ ಪಂದ್ಯಾವಳಿಗೆ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್ ವಿ ದೇಶಪಾಂಡೆ ಅವರು ಚಾಲನೆ ನೀಡಿ ಮಾತನಾಡುತ್ತಾ, ಕುಸ್ತಿ ಕೇವಲ ಶಾರೀರಿಕ ಶಕ್ತಿಯ ಕ್ರೀಡೆಯಲ್ಲ, ಅದು ಧೈರ್ಯ, ಶಿಸ್ತು, ನಿಯಮಿತ ಅಭ್ಯಾಸ ಮತ್ತು ಮನೋನಿಬಂಧನದ ಪ್ರತೀಕವಾಗಿದೆ ಎಂದರು.