ಶಿವಮೊಗ್ಗ: ಬಿಜೆಪಿ ಪಕ್ಷ ಸೇರಲು ಆಹ್ವಾನ ಬಂದಿದೆ ನಗರದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ
ಬಿಜೆಪಿ ಪಕ್ಷ ಸೇರಲು ಆಹ್ವಾನ ಬಂದಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸೋಮವಾರ ಶಿವಮೊಗ್ಗ ನಗರದಲ್ಲಿ ನಡೆದ ಅವರು ಮರಳಿ ಬಿಜೆಪಿ ಪಕ್ಷ ಸೇರ್ಪಡೆ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಪಕ್ಷ ಸೇರಲು ಆಹ್ವಾನ ಬಂದಿದೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ. ನನ್ನ ಬೆಂಬಲಿಗರ ಜೊತೆ ಕೂಡ ಕೂತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ. ಅಲ್ಲದೆ ಹಾವೇರಿ ಜಿಲ್ಲೆಯ ಉಪಚುನಾವಣೆಯಲ್ಲಿ ಕಾಂತೇಶ್ ಸ್ಪರ್ಧೆ ಪ್ರಸ್ತಾಪ ಇಲ್ಲ ಎಂದು ಸಹ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದರು.