ದಸರಾ ಹಬ್ಬದ ಪ್ರಯುಕ್ತ ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯವನ್ನು ವೀಕ್ಷಿಸಲು ಅನುವಾಗುವಂತೆ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 07 ರವರೆಗೆ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕ ವೀಕ್ಷಣೆಗೆ ತೆರೆದಿರಲಾಗುವುದು ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.