ಕಾರವಾರ: ನಗರದ ಸೈಂಟ್ ಜೋಸೆಫ್ ಪದವಿ ಪೂರ್ವ ಮಹಾವಿದ್ಯಾಲಯಲ್ಲಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ
ಮಂಗಳವಾರ ಮಧ್ಯಾಹ್ನ 12ರ ಸುಮಾರು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ನಗರದ ಸೈಂಟ್ ಜೋಸೆಫ್ ಪದವಿ ಪೂರ್ವ ಮಹಾವಿದ್ಯಾಲಯಲ್ಲಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ವೀರ ವನಿತೆ ಓಬವ್ವ ಮನೆಯಲ್ಲಿದ ಒನೆಕೆಯನ್ನೇ ಆಯುಧವನ್ನಾಗಿಸಿಕೊಂಡು ಎದುರಾಳಿ ಸೈನಿಕರನ್ನು ಹೊಡೆದುರುಳಿಸಿ ಕೋಟೆಯನ್ನು ರಕ್ಷಿಸಿದ್ದು, ಅವರಲ್ಲಿದ್ದ ಧೈರ್ಯ, ಶೌರ್ಯ ಮತ್ತು ಸಾಹಸ ಪ್ರತಿಯೊಬ್ಬರಿಗೂ ಆದರ್ಶವಾಗಬೇಕು ಎಂದರು.