ಸಿರಗುಪ್ಪ: ಬಳ್ಳಾರಿ: 'ನಶಾ ಮುಕ್ತ ಯುವ ವಿಕಸಿತ ಭಾರತ' ಅಭಿಯಾನದಡಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು
ಬಳ್ಳಾರಿಯ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಕಾಲೇಜಿನಲ್ಲಿ 'ನಶಾ ಮುಕ್ತ ಯುವ ವಿಕಸಿತ ಭಾರತ' ಜಿಲ್ಲಾಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಯುವಜನತೆಯಲ್ಲಿ ಮಾದಕ ವ್ಯಸನಗಳ ವಿರುದ್ಧ ಜಾಗೃತಿ ಮೂಡಿಸಿ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾಮಟ್ಟದಲ್ಲಿ ಗೆದ್ದವರು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.