ಶಿರಸಿ: ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ, ಶಾಸಕ ಭೀಮಣ್ಣ ನಾಯ್ಕ ಭಾಗಿ
ಶಿರಸಿ : ನಗರದಲ್ಲಿರುವ ತಹಶೀಲ್ದಾರ್ ಕಾರ್ಯಾಲಯ ಸಭಾಂಗಣದಲ್ಲಿ ಇಂದು ಬುಧವಾರ ಬೆಳಿಗ್ಗೆ 10.30 ಗಂಟೆ ಸುಮಾರಿಗೆ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರು ಭಾಗವಹಿಸಿ ಸೃಷ್ಟಿಕರ್ತ ಬ್ರಹ್ಮನ ಅಂಶವಾಗಿರುವ ದೇವಶಿಲ್ಪಿ ವಿಶ್ವಕರ್ಮನು ಸಕಲರ ಜೀವನದಲ್ಲೂ ಸುಖ, ಸಮೃದ್ಧಿ ಮತ್ತು ಯಶಸ್ಸನ್ನು ದಯಪಾಲಿಸಲೆಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಪಟ್ಟರಾಜ ಗೌಡ, ನಗರ ಸಭಾ ಅಧ್ಯಕ್ಷೆ ಶರ್ಮಿಳಾ ಮಾದನಗೆರಿ, ಸುಮಾ ಉಗ್ರಣಕರ್ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.