ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ರೌಡಿ ಶೀಟರ್ ಬರ್ಬರ ಹತ್ಯೆ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ತಡರಾತ್ರಿ ಲಕ್ಷ್ಮೀ ಸಾಗರ ಗ್ರಾಮದ 26 ವರ್ಷ ದ ಮಹೇಶ್ ಎಂಬ ರೌಡಿ ಶೀಟರ್ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಬಾರ್ ಬಳಿ ಯುವಕರ ನಡುವೆ ನಡೆದ ಘರ್ಷಣೆ ಕೊಲೆಯಲ್ಲಿ ಅಂತ್ಯವಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಮೇಲುಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಪಾಂಡವಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ದೇಹವನ್ನು ಪಂಚನಾಮೆ ನಡೆಸಿ ವಾರಸುದಾರರಿಗೆ ಮಧ್ಯಾಹ್ನ 2 ಗಂಟೆಯಲ್ಲಿ ಒಪ್ಪಿಸಿದ್ದಾರೆ. ಪ್ರಕರಣ ಮೇಲುಕೋಟೆ ಪೊಲೀಸ್ ಠಾಣಾಯಲ್ಲಿ ಭಾನುವಾರ ದ