ಬೆಂಗಳೂರು ಉತ್ತರ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದ ಬೆಂಗಳೂರಿನ ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನ
ಬೆಂಗಳೂರು ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನವನ್ನು ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ವರದಿಗಾರರ ಕೂಟದ ಅಧ್ಯಕ್ಷ ಆರ್.ಟಿ. ವಿಠ್ಠಲಮೂರ್ತಿ, ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಕಿರಣ್ ಹಾಗೂ ಇತರ ಪದಾಧಿಕಾರಿಗಳು ಮತ್ತು ವರದಿಗಾರರು ಉಪಸ್ಥಿತರಿದ್ದರು.