ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ಬಸವೇಶ್ವರ ಹಾಗೂ ಆದರ್ಶ ನಗರ ಫೀಡರ್ಗಳ ವ್ಯಾಪ್ತಿಯಲ್ಲಿನ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಡಿಸೆಂಬರ್ 4 ರಂದು ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು ಡಿ.3 ರಂದು ಮಾಹಿತಿ ತಿಳಿಸಿದ್ದಾರೆ