ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು, ವಯೋಮಿತಿ ಸಡಿಲ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಡಿಸೆಂಬರ್-10 ರಂದು ನಡೆಯುವ ಪ್ರತಿಭಟನಾ ಧರಣಿಗೆ ಭಾರತ ವಿದ್ಯಾರ್ಥಿ ಫೆಡರೇಶನ್ ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ಕರ್ನಾಟಕ ರಾಜ್ಯ ಸಮಿತಿಗಳು ಬೆಂಬಲಿಸುತ್ತವೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ತಿಳಿಸಿದರು.