ಬೆಂಗಳೂರು ಉತ್ತರ: ಸ್ವಾತಂತ್ರ್ಯ ದಿನಾಚರಣೆಯಂದೇ ವೀಕ್ಷಕರಿಗೆ ಗುಡ್ನ್ಯೂಸ್; ಬಿಗ್ಬಾಸ್ ಫಸ್ಟ್ ಪ್ರೋಮೋ ರಿಲೀಸ್
ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ವೀಕ್ಷಕರಿಗೆ ಗುಡ್ನ್ಯೂಸ್ ಕೊಟ್ಟಿದೆ ಬಿಗ್ಬಾಸ್ ತಂಡ. ಹೌದು, ಬಿಗ್ಬಾಸ್ ಸೀಸನ್ 12 ಸದ್ಯದಲ್ಲೇ ಆರಂಭವಾಗುತ್ತಿದೆ. ಇದೀಗ ಕಲರ್ಸ್ ಕನ್ನಡ ಬಿಗ್ಬಾಸ್ ಸೀಸನ್ 12ರ ಮೊದಲ ಪ್ರೋಮೋವನ್ನು ರಿಲೀಸ್ ಮಾಡಿದೆ. ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮೊದಲ ಪ್ರೋಮೋ ಬಿಡುಗಡೆ ಆಗಿದ್ದು, ಇನ್ನೇನು ಶೀಘ್ರದಲ್ಲಿಯೇ ಪ್ರಸಾರದ ಅಪ್ಡೇಟ್ ಸಿಗಲಿದೆ. ಎಂದಿನಂತೆ ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಣೆ ಮಾಡಲಿದ್ದಾರೆ. ಈ ಮೊದಲು ಬೇರೆ ನಿರೂಪಕರು ನಡೆಸಿಕೊಡಲಿದ್ದಾರೆ ಎನ್ನಲಾಗಿತ್ತು.