ಶಿವಮೊಗ್ಗ: ಸಾಗರದ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ, ಪರಿಶೀಲನೆ
ಸಾಗರದ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಗುರುವಾರ ದಿಢೀರ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಕಾರ್ಯವೈಖರಿಗಳ ಬಗ್ಗೆ ಶಾಸಕ ಗೋಪಾಲಕೃಷ್ಣ ಅವರು ಪರಿಶೀಲನೆಯನ್ನು ನಡೆಸಿದ್ದು, ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ, ಆಹಾರ ಹಾಗೂ ಶುಚಿತ್ವತೆಯನ್ನು ಹೆಚ್ಚು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಸಾರ್ವಜನಿಕರಿಗೆ ಉತ್ತಮ ಸೇವೆ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಆಸ್ಪತ್ರೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ತಾಕೀತು ಮಾಡಿದರು.