ಬಂಟ್ವಾಳ: ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ, ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ
ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಮೂವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸನತ್ ಕುಮಾರ್, (23) , ರಾಝಿಕ್ (23)ಮತ್ತು ಚೇತನ್ (23) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ 6.27 ಗ್ರಾಂ ಗಾಂಜಾ, 3 ಮೊಬೈಲ್ ಗಳು ಸಣ್ಣ ಚೂರಿ, ದ್ವಿಚಕ್ರ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.