ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅಹಿತಕರ ಘಟನೆಗಳನ್ನು ತಡೆಯಲು ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟದ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಆಟೋ, ಕಾರು, ಬೈಕ್ ಸೇರಿದಂತೆ ಪ್ರತೀ ವಾಹನವನ್ನೂ ಪರಿಶೀಲಿಸಲಾಗುತ್ತಿದೆ