ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಪಂಚಾಯತ್ ಆಫೀಸ್ ಬಳಿ ಒಣಗಿದ ಮರಕ್ಕೆ ಆಕಸ್ಮಿಕ ಬೆಂಕಿ ತಗಲಿ ಮರದ ಗೆಲ್ಲು ಹೆದ್ದಾರಿಗೆ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತ ಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ಕೂಡಲೇ ಮುಲ್ಕಿ ಪೊಲೀಸರು ಹಾಗೂ ಮಂಗಳೂರಿನಿಂದ ಅಗ್ನಿಶಾಮಾಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.