ಜಗಳೂರು: ಮತಿಗೆಟ್ಟಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಬಿ.ದೇವೇಂದಪ್ಪ ಚಾಲನೆ
ಜಗಳೂರು ತಾಲ್ಲೂಕಿನ ಮತಿಗೆಟ್ಟಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಬಿ.ದೇವೆಂದ್ರಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಬರ ಆವರಿಸಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ಹೆಚ್ಚಾಗಿದೆ, ಇನ್ನೂ ತಾಲ್ಲೂಕಿನಲ್ಲಿ ಕೂಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶವಿದ್ದು ಇದರಿಂದ ಜನರು ರೋಗಳಿಗೆ ತುತ್ತಾಗುತ್ತಾರೆ. ಹೀಗಾಗಿ ಜನರಿಗೆ ಕಡಿಯ ಬವಣೆ ನೀಗಿಸಲು ಶುದ್ಧ ನೀರಿನ ಘಟಕಕ್ಕೆ ಚಾಲನೆ ನೀಡಲಾಗಿದೆ ಎಂದರು.