ಭಾಲ್ಕಿ: ತಾಲೂಕಿನ ಭಾಟಸಂಗಾವಿ ಗ್ರಾಮದ ಬಳಿ ರಭಸವಾಗಿ ಹರಿಯುತಿದ್ದ ಮಾಂಜ್ರಾ ನದಿನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಇಂದು ಶನಿವಾರ ಬೆಳಗ್ಗೆ ಪತ್ತೆಯಾಗಿದೆ. ಭಾಟಸಂಗಾವಿ ಗ್ರಾಮದ ನಿವಾಸಿ ನಾಮದೇವ ಭೀಮರಾವ ಝಳಕೆ(65) ನದಿನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಈ ಕುರಿತು ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ