ಬಾಗಲಕೋಟೆ: ನಗರದಲ್ಲಿ ಯಶಸ್ವಿಯಾಗಿ ಜರುಗಿದ ಪ್ರಜಾಪ್ರಭುತ್ವ ದಿನಾಚರಣೆ
ಬಾಗಲಕೋಟೆ ನಗರದಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ 18ನೇ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹೆಚ್.ವೈ ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶಶಿಧರ್ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ ಚವ್ಹಾಣ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.